ಡಿಕೆಶಿ ಭೇಟಿ ಮಾಡುವೆ ಎಂದ ರಮೇಶ್ ಜಾರಕಿಹೊಳಿ

ಶುಕ್ರವಾರ, 6 ಸೆಪ್ಟಂಬರ್ 2019 (17:58 IST)

ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ರನ್ನು ಭೇಟಿ ಮಾಡೋದಾಗಿ ಹೇಳಿದ್ದಾರೆ.

ವಿಚಾರಣೆಗಾಗಿ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ರನ್ನು ಬಂಧನ ಮಾಡಿದ್ದಾರೆ. ಡಿಕೆಶಿ ಸ್ನೇಹಿತರಾಗಿದ್ದು, ದೆಹಲಿಯಲ್ಲೇ ಭೇಟಿ ಮಾಡುವೆ ಅಂತ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ್ ಗೆ ಆಗಮಿಸಿರೋ ರಮೇಶ್, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಉಪ ಚುನಾವಣೆ ಮೇಲೆ ಕಣ್ಣಿಟ್ಟಿದ್ದು ಅದಕ್ಕೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.

ಇದೇ ವೇಳೆ, ಸತೀಶ್ ಜಾರಕಿಹೊಳಿ ವಿರುದ್ಧ ಹರಿಹಾಯ್ದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ, ಸತೀಶ್ ರನ್ನು ಧಾರವಾಡಕ್ಕೆ ಸೇರಿಸಬೇಕು ಅನ್ನೋ ಮೂಲಕ ಮೆಂಟಲ್ ಹಾಸ್ಪಿಟಲ್ ಗೆ ಕಳಿಸಬೇಕಿದೆ ಎಂದು ಪರೋಕ್ಷ ಟಾಂಗ್ ನೀಡಿದ್ರು.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ