ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು, ಚಾರ್ಜ್‌ಶೀಟ್‌ನಲ್ಲಿ ಬೆಚ್ಚಿಬೀಳಿಸಿದ ರಾಮೇಶ್ವರ್ ಕೆಫೆ ಸ್ಪೋಟದ ಆರೋಪಿಗಳ ಪ್ಲ್ಯಾನ್

Sampriya

ಸೋಮವಾರ, 9 ಸೆಪ್ಟಂಬರ್ 2024 (19:24 IST)
Photo Courtesy X
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ಎನ್‌ಐಎ ಸೋಮವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಮಾರ್ಚ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು ಮತ್ತು ಹೋಟೆಲ್ ವ್ಯಾಪಕ ಹಾನಿಯಾಗಿತ್ತು. ಈ ಸಂಬಂಧ ತನಿಖೆ ಆರಂಭಿಸಿದ ಎನ್‌ಐಎ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು ಮತ್ತು ಇತರ ಏಜೆನ್ಸಿಗಳ ಸಹಕಾರದೊಂದಿಗೆ ನಾಲ್ವರನ್ನು ಬಂಧಿಸಿತ್ತು.

ಇಂದು ಆರೋಪಿಗಳ ವಿರುದ್ಧದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಅದರಲ್ಲಿ 2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್​ ವಿಫಲವಾದ ಹಿನ್ನೆಲೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಲು ಪ್ಲ್ಯಾನ್​ ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಿದ್ದಾರೆ ಎಂದು ಎನ್​ಐಎ ವಿಶೇಷ ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​​ಶೀಟ್​​​ನಲ್ಲಿ ಉಲ್ಲೇಖಿಸಲಾಗಿದೆ.

ಡಾರ್ಕ್ ವೆಬ್‌ನಿಂದ ಡೌನ್‌ಲೋಡ್ ಮಾಡಲಾದ ಭಾರತದ ಮತ್ತು ಬಾಂಗ್ಲಾದೇಶದ ವಿವಿಧ ಗುರುತಿನ ದಾಖಲೆಗಳ ಜೊತೆಗೆ ಮೋಸದಿಂದ ಪಡೆದ ಭಾರತೀಯ ಸಿಮ್ ಕಾರ್ಡ್‌ಗಳು ಮತ್ತು ಭಾರತೀಯ ಬ್ಯಾಂಕ್ ಖಾತೆಗಳನ್ನು ತಾಹಾ ಮತ್ತು ಶಾಜಿಬ್ ಬಳಸಿದ್ದಾರೆ ಎಂದು ಎನ್ಐಎ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ