ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ರಾಜ್ಯದ 11 ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳಿಂದ ಶೋಧ

sampriya

ಮಂಗಳವಾರ, 21 ಮೇ 2024 (14:27 IST)
Photo By X
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ 11 ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಮಾ1ರಂದು ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ, ಘಟನೆಯಲ್ಲಿ ಕೆಫೆ ಸಿಬ್ಬಂದಿ ಹಾಗೂ ಗ್ರಾಹಕರು ಸೇರಿದಂತೆ 9 ಜನ ಗಾಯಗೊಂಡಿದ್ದರು.

ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಪ್ರಮುಖ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್​ ಬಂಧಿಸಲಾಗಿದೆ. ಇಬ್ಬರನ್ನು ವಿಚಾರಣೆ ನಡೆಸಿದ ಪೊಲೀಸರು ಮಾಹಿತಿ ಪಡೆದು ಇಂದು ರಾಜ್ಯದ ಹಲವು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿಯಲ್ಲಿ ದಾಳಿ ನಡೆಸಿದ್ದಾರೆ.

ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್​ಫೀಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆಸಲಾಗಿತ್ತು. ಈ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ನಡೆದು  43 ದಿನಗಳ ಬಳಿಕ  ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ