ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ನಂಟು

geetha

ಶನಿವಾರ, 2 ಮಾರ್ಚ್ 2024 (16:00 IST)
ಬೆಂಗಳೂರು : ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ನಿನ್ನೆಯ ಸ್ಫೋಟಕ್ಕೂ ಯಾವುದೇ ರೀತಿಯ ಸಾಮ್ಯತೆಯಿಲ್ಲ. ಅದು ಕುಕ್ಕರ್‌ ನಲ್ಲಿ ಆದ ಬ್ಲಾಸ್ಟ್‌ . ಇಲ್ಲಿ ಯಾವ ಕುಕ್ಕರೂ ಬ್ಲಾಸ್ಟ್‌ ಆಗಿಲ್ಲ ಎಂದು ಸಿಎಂ ಹೇಳಿಕೆ ನೀಡಿದ್ದರು. ತುಸು ಹೊತ್ತಿನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವು ಮಂಗಳೂರು ಸ್ಫೋಟ ಪ್ರಕರಣದೊಂದಿಗೆ ಸಾಮ್ಯತೆ ಹೊಂದಿದೆ. ಎರಡೂ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಸಾಕಷ್ಟು ಹೋಲಿಕೆ ವ್ಯಕ್ತವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಒಂದು ತಂಡ ಅಲ್ಲಿಗೂ ಸಹ ತೆರಳಿದೆ ಎಂದು ಹೇಳಿಕೆ ನೀಡಿದ್ದಾರೆ.

ಶುಕ್ರವಾರ ನಗರದ ರಾಮೇಶ್ವರಂ ಕೆಫೆ ಹೋಟೆಲ್‌ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯಲ್ಲಿಯೇ ಪರಸ್ಪರ ವಿರೋಧ ವ್ಯಕ್ತವಾಗಿದೆ. ಮಂಗಳೂರು ಕುಕ್ಕರ್‌ ಸ್ಪೋಟಕ್ಕೂ ರಾಮೇಶ್ವರಂ ಕೆಫೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೆ, ಎರಡೂ ಪ್ರಕರಣಗಳಿಗೆ ಸಾಕಷ್ಟು ಸಾಮ್ಯತೆಯಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. 
 
ಸಿಎಂ ಮತ್ತು ಡಿಸಿಎಂ ಅವರ ಪರಸ್ಪರ ವೈರುಧ್ಯಗಳ ಹೇಳಿಕೆಯಿಂದಾಗಿ ಗೊಂದಲ ಸೃಷ್ಟಿಯಾಗಿದ್ದು, ಇಬ್ಬರ ನಡುವೆ ಸಮನ್ವಯದ ಕೊರತೆಯಿದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.  
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ