ಸಾರಿಗೆ ನೌಕರರೊಂದಿಗೆ ಸಂಧಾನಕ್ಕೆ ರಾಮಲಿಂಗಾ ರೆಡ್ಡಿ ಸೂಕ್ತ: ಸಿಎಂ

ಮಂಗಳವಾರ, 26 ಜುಲೈ 2016 (19:00 IST)
ಸಾರಿಗೆ ನೌಕರರ ಸಮಸ್ಯೆ ಪರಿಹರಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೇ ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿಪ್ರಾಯ ಪಟ್ಟಿದ್ದಾರೆ.
 
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಸಾರಿಗೆ ನೌಕರರ ಜೊತೆ ಸಂಧಾನ ಸಭೆ ನಡೆಸಲು ಸಚಿವ ರಾಮಲಿಂಗಾ ರೆಡ್ಡಿ ಅವರೇ ಸೂಕ್ತ ಎಂದು ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದೆ.
 
ಸಿಎಂ ನೇತೃತ್ವದ ಶಾಸಕಾಂಗ ಸಭೆಯಲ್ಲಿ ಬಹುತೇಕ ಸಚಿವರು ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಏಕೆ ಈ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಪ್ರಶ್ನಿಸಿದರು. 
 
ಸಚಿವರ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ಮೊದಲು ಸಾರಿಗೆ ನೌಕರರ ಬೇಡಿಕೆಯ ಕುರಿತು ತಿಳಿಸಿರು, ನೆರೆ ರಾಜ್ಯಗಳ ವೇತನ ಕುರಿತು ಸ್ಪಷ್ಟವಾದ ಮಾಹಿತಿ ನೀಡಿ. ಸಾರಿಗೆ ಇಲಾಖೆ ನಷ್ಟದಲ್ಲಿದ್ದರು ನೌಕರರಿಗೆ 8 ರಿಂದ 10 ಪ್ರತಿಶತ ವೇತನ ಹೆಚ್ಚಿಸಲು ಸರಕಾರ ಸಮ್ಮತಿ ನೀಡಿದೆ. ಇಲಾಖೆ ಸ್ವತ್ತುಗಳ ಬಾಡಿಗೆ ನಂಬಿಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ