ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

Sampriya

ಗುರುವಾರ, 22 ಮೇ 2025 (18:23 IST)
Photo Credit X
ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.  

ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ
ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದಿದ್ದಾರೆ.

ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ