ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಸಚಿವ ಸಂಪುಟದಲ್ಲಿ ತೀರ್ಮಾನ

Sampriya

ಶುಕ್ರವಾರ, 26 ಜುಲೈ 2024 (18:35 IST)
Photo Courtesy X
ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಬಗ್ಗೆ ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ  ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ತೀರ್ಮಾನ ಕೈಗೊಳ್ಳಲಾಯಿತು..

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಈ ವಿಷಯವನ್ನು ತಿಳಿಸಿದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡುವುದರಲ್ಲಿ ಯಾವುದೇ ರಾಜಕೀಯವಿಲ್ಲ. ಬ್ರ್ಯಾಂಡ್‌ ಬೆಂಗಳೂರು ಭಾಗವಾಗಿ ಈ ಹೆಸರು ಬದಲಾಯಿಸಲಾಗುವುದು. ಹೆಸರು ಬದಲಾಯಿಸುವ ಬಗ್ಗೆ  ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪ್ರಮುಖ ವ್ಯಕ್ತಿಗಳಿಂದ
ಒತ್ತಾಯವಿತ್ತು. ಈ ಸಂಬಂಧ ಕೂಡಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಹೇಳಿದರು.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪುನರ್‌ನಾಮಕರಣ ಮಾಡುವುದರಿಂದ ಸ್ಥಳೀಯರಿಗೆ ಬೆಂಗಳೂರು ಬ್ರ್ಯಾಂಡ್‌ನ ಎಲ್ಲ ಪ್ರಯೋಜನಗಳು ಸಿಗಲಿವೆ. ಅಲ್ಲಿನ ಆಸ್ತಿ ಮೌಲ್ಯವೂ ಹೆಚ್ಚಾಗಲಿದೆ ಎಂದು ಪಾಟೀಲ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ