ಅಂಬಿ ನಿಧನರಾಗಿ 2 ದಿನ ಕಳೆದರೂ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ವಿರುದ್ಧ ಆಕ್ರೋಶ

ಸೋಮವಾರ, 26 ನವೆಂಬರ್ 2018 (08:40 IST)
ಮಂಡ್ಯ : ರೆಬಲ್ ಸ್ಟಾರ್ ಅಂಬರೀಶ್ ಅವರು ನಿಧನರಾಗಿ 2 ದಿನ ಕಳೆದರೂ ಅಂತಿಮ ದರ್ಶನಕ್ಕೆ ಆಗಮಿಸದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.


ಅಂಬರೀಶ್ ಅವರು ನಿಧನರಾದ ಹಿನ್ನಲೆ ಚಿತ್ರರಂಗದ ಎಲ್ಲಾ ಕಲಾವಿದರೂ, ರಾಜಕೀಯ ಗಣ್ಯರು ಬಂದು ಅಂಬರೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಆದರೆ ರಮ್ಯಾ ಮೊದಲ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದಾಗ ಅವರ ಗೆಲುವಿಗೆ ಪ್ರಮುಖ ಕಾರಣೀಕರ್ತರಾದ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯಲು ಇನ್ನೂ ಆಗಮಿಸಲಿಲ್ಲ.


ಅಂಬಿ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತಂದಾಗಲೂ ರಮ್ಯಾ ಅಂತಿಮ ದರ್ಶನಕ್ಕೆ ಆಗಮಿಸುತ್ತಾರೆ ಎನ್ನಲಾಗಿತ್ತು. ಆದರೆ ಅಂಬಿ ನಿಧನರಾಗಿ 2 ದಿನಗಳಾದರೂ ರಮ್ಯಾ ಅವರು ಮಂಡ್ಯಕ್ಕೆ ಬಂದಿಲ್ಲ. ಇಂದು ಅಂಬಿ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಇಂದಾದರೂ ರಮ್ಯಾ ಅವರು ಅಂತಿಮ ದರ್ಶನಕ್ಕೆ ಬರುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ