ಬೆಂಗಳೂರು: ರಾಜ್ಯದ ಸರ್ಕಾರೀ ಅಧಿಕಾರಿಗಳೊಂದಿಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಭೆ ನಡೆಸಲು ಮುಂದಾಗಿದ್ದರು ಎಂಬ ಆರೋಪಗಳ ಬಗ್ಗೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರೀ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಕಾಂಗ್ರೆಸ್ ಉಸ್ತುವಾರಿಗೆ ಅಧಿಕಾರ ಕೊಟ್ಟವರು ಯಾರು ಎಂದಿದೆ.
ರಣದೀಪ್ ಸುರ್ಜೇವಾಲ ಪಕ್ಷಕ್ಕಷ್ಟೇ ಸೀಮಿತವಾಗಿರಬೇಕು. ಆದರೆ ಸರ್ಕಾರೀ ಅಧಿಕಾರಿಗಳೊಂದಿಗೆ ನೇರವಾಗಿ ಸಭೆ ನಡೆಸಲು ಅವರಿಗೆ ಅಧಿಕಾರವಿಲ್ಲ. ೀ ಬಗ್ಗೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ವಸೂಲಿವಾಲಾ ರಣದೀಪ್ ಸುರ್ಜೇವಾಲ ಕೇವಲ ರಾಜ್ಯ ಉಸ್ತುವಾರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ? ಇಷ್ಟು ದಿನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ರಣದೀಪ್ ಸುರ್ಜೇವಾಲಾ, ಈಗ ಸೂಪರ್ ಸಿಎಂ ರೀತಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸುರ್ಜೇವಾಲಾಗೆ ಆ ಅಧಿಕಾರ ಕೊಟ್ಟವರು ಯಾರು ? ಸರ್ಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯ! ರಾಜ್ಯ ಆಡಳಿತರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಅಧಿಕಾರಕ್ಕಾಗಿ ಅಂತರ್ಯುದ್ಧ ನಡೆಯುತ್ತಿದೆ. ಹೀಗಾಗಿ ಹೈಕಮಾಂಡ್ ಸದ್ದಿಲ್ಲದೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾರನ್ನೇ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಶಂಕೆಯೂ ವ್ಯಕ್ತವಾಗುತ್ತಿದೆ.
ಹೈಕಮಾಂಡ್ ಗುಲಾಮಗಿರಿಯಲ್ಲಿ ತೊಡಗಿರುವ ಡಮ್ಮಿ ಸಿಎಂ ಸಿದ್ದರಾಮಯ್ಯ ಹಾಗೂ ಡಮ್ಮಿ ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕದ ಸ್ವಾಭಿಮಾನವನ್ನು ಅಡವಿಟ್ಟಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಿರುವ ಜನಾದೇಶಕ್ಕೆ ಅಪಮಾನ, ವಿದ್ರೋಹ ಎಸಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.