ಸ್ವಾತಿಯನ್ನು ಪ್ರೀತಿಸುತ್ತಿದ್ದ ನಯಾಜ್ ತನ್ನ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಆಕೆಯನ್ನು ಕೊಲೆ ಮಾಡಿದ್ದಾನೆ. ನಯಾಜ್‌ನನ್ನು ಬಂಧಿಸಿ ತನಿಖೆ ಆರಂಭಿಸಿರುವ ಪೊಲೀಸರು, ಇದೀಗ ಮತ್ತಿಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರಿನ ಸ್ವಾತಿ ಅವರನ್ನು ಮಾರ್ಚ್ 3ರಂದು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಯಲ್ಲಿ ಎಸೆಯಲಾಗಿತ್ತು. ಈ ಘಟನೆ ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ.
ಆರಂಭದಲ್ಲಿ ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಗಿತ್ತು. ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಮುಖ ಆರೋಪಿ ನಯಾಜ್‌ನನ್ನು ಬಂಧಿಸಿದ್ದರು. ಈ ಮಧ್ಯೆ ಜಸ್ಟಿಸ್ ಫಾರ್ ಸ್ವಾಮಿ ಎಂಬ ಅಭಿಯಾನವು ಶುರುವಾಗಿತ್ತು.