ಶ್ರೇಣಿ ಆಧಾರದಲ್ಲಿ ಪೊಲೀಸರ ವೇತನ ಹೆಚ್ಚಳ: ಜಿ.ಪರಮೇಶ್ವರ್

ಬುಧವಾರ, 19 ಅಕ್ಟೋಬರ್ 2016 (12:08 IST)
ಪೊಲೀಸ್‌ರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಔರಾದ್ಕರ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದೆ. ಪೊಲೀಸ್ ಅಧಿಕಾರಿಗಳ ಶ್ರೇಣಿ ಆಧಾರದ ಮೇಲೆ ವೇತನ ಹೆಚ್ಚಳ ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್‌ರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಔರಾದ್ಕರ್ ನೇತೃತ್ವದ ಸಮಿತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಥಿಕ ಇಲಾಖೆ ಗಮನಕ್ಕೆ ತಂದಿದ್ದಾರೆ, ಎಷ್ಟು ಪ್ರತಿಶತ ವೇತನ ಹೆಚ್ಚಿಸಬೇಕು ಎನ್ನುವುದರ ಕುರಿತು ನಿರ್ಧರಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. 
 
ಬಿಜೆಪಿಯವರು ಎಂದೂ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಹೇಳಿಲ್ಲ. ನಮ್ಮ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
 
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ