ಮಗುವಿನ ಮೇಲೆ ಅತ್ಯಾಚಾರ ಎಸಗಿದ ವೃದ್ಧ ಆತ್ಮಹತ್ಯೆ

ಶನಿವಾರ, 27 ಆಗಸ್ಟ್ 2016 (11:28 IST)
ಐದು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ತಲೆ ಮರೆಸಿಕೊಂಡಿದ್ದ 58 ವರ್ಷದ ವೃದ್ಧ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾನೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಸುತಗಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಬಸಪ್ಪ ಗುಂಡೂರು ಎಂದು ಗುರುತಿಸಲಾಗಿದೆ. 
 
ಬಸಪ್ಪ 10 ದಿನಗಳ ಹಿಂದೆ 5 ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದ. ನಿನ್ನೆ ಕಿಮ್ಸ್‌ನಲ್ಲಿ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.
 
ತನ್ನ ದುಷ್ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಊರಿಂದ ಪರಾರಿಯಾಗಿದ್ದ ಆರೋಪಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ನಿನ್ನೆ ತಡರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 
 
ಅಪಮಾನ ಮತ್ತು ಬಂಧನಕ್ಕೆ ಹೆದರಿ ಬಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಪ್ರಕರಣ ದಾಖಲಿಸಿಕೊಂಡಿರುವ ಕಲಘಟಗಿ ಠಾಣಾ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
 
ಬಾಲಕಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ವೆಬ್ದುನಿಯಾವನ್ನು ಓದಿ