ಅತ್ಯಾಚಾರ ಆರೋಪಿಯ ಕೊಲೆ

ಭಾನುವಾರ, 2 ಆಗಸ್ಟ್ 2015 (16:24 IST)
ಬೆಂಗಳೂರಿನ ಎಚ್​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾವಿನಲ್ಲಿ ಸಿನಿಮೀಯ ರೀತಿಯಲ್ಲಿ ಯುವಕನೋರ್ವನನ್ನು ಹತ್ಯೆಗೈಯ್ಯಲಾಗಿದೆ.

ಅಬ್ದುಲ್(26) ಕೊಲೆಯಾದ ಯುವಕನಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅತ್ಯಾಚಾರ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಅಬ್ದುಲ್ 15 ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿ ಬಂದಿದ್ದ ಎನ್ನಲಾಗಿದೆ. 
 
ಹೆಚ್‌ಎಎಲ್‌‌‌‌‌‌‌‌‌ ಮಾರ್ಕೆಟ್ ಬಳಿ ಬೆಳಗ್ಗೆ ನಡೆದಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. 
 
ಎಚ್​ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ