ಮಹಿಳೆಯ ಮೇಲೆ ಅತ್ಯಾಚಾರ, ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ

ಸೋಮವಾರ, 1 ಸೆಪ್ಟಂಬರ್ 2014 (12:39 IST)
ಬೆಂಗಳೂರಿನ ಕನಕಪುರ ರಸ್ತೆಯ ಜರಗನಹಳ್ಳಿಯಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸರ್ಕಾರಿ ಶಾಲೆ ಆವರಣದಲ್ಲಿ ಸಂಭವಿಸಿದೆ. ಜಯಮ್ಮ ಎಂಬ 50 ವರ್ಷದ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹತ್ಯೆ ಮಾಡಿದ ಬಳಿಕ ಶವಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಿಗಿನ ಜಾವ 1 ಗಂಟೆ ಸಂದರ್ಭದಲ್ಲಿ ಮಹಿಳೆಯನ್ನು ಕರೆದುಕೊಂಡು ವಿವಸ್ತ್ರಗೊಳಿಸಿ ಅತ್ಯಾಚಾರ ಮಾಡಿ ನಂತರ ತಲೆಯ ಮೇಲೆ ಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಶಾಲೆ ಆವರಣದಲ್ಲಿ ಬ್ಯಾಡ್ಮಿಂಟನ್ ಆಡಲು  ಬಂದಿದ್ದ ಜನರಿಗೆ ಶವ ಪತ್ತೆಯಾಗಿತ್ತು.

ವೆಬ್ದುನಿಯಾವನ್ನು ಓದಿ