ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು
ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನೊಬ್ಬ ಗ್ರಾಮಸ್ಥರಿಂದ ಒದೆ ತಿಂದ ಘಟನೆ ಗದಗ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನಡೆದಿದೆ.
ಕಾಮುಕ ಮಂಜುನಾಥನನ್ನ ಹಿಡಿದ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ ಮುಳಗುಂದ ಪೊಲೀಸರು ಕಾಮುಕನನ್ನ ಕರೆದೊಯ್ದಿದ್ದಾರೆ. ಹಳ್ಳಿಗಳಲ್ಲಿ ಹಲವೆಡೆ ಈಗಲೂ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದರಿಂದ ಮಹಿಳೆಯರು ಬಯಲು ಬಹಿರ್ದೆಸೆಗೆ ತೆರಳುತ್ತಿರುವುದರಿಂದ ಇಂತಹ ಕಾಮುಕರಿಗೆ ತುತ್ತಾಗುತ್ತಿದ್ದಾರೆ.