ಅತ್ಯಾಚಾರ ಪ್ರಕರಣ, ಮತ್ತೇ ಪ್ರಜ್ವಲ್ ರೇವಣ್ಣಗೆ ಮೆಡಿಕಲ್ ಟೆಸ್ಟ್
ಈಗಾಗಲೇ ಎಸ್‍ಐಟಿ ಅಧಿಕಾರಿಗಳು ಆರೋಪಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿನ ಮುಖ ಮರೆ ಮಾಚಿಕೊಂಡಿರುವ ವ್ಯಕ್ತಿಯ ಪತ್ತೆಗೆ ಅಂಗಾಂಗ ಪರೀಕ್ಷೆಗೆ ಎಸ್‍ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ.
ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆದಿತ್ತು. ಇದೀಗ ದಾಖಲಾಗಿದ್ದ, 2ನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‍ಗೆ ವೈದ್ಯಕೀಯ ಪರೀಕ್ಷೆ ನಡೆದಿದೆ. ಪ್ರಜ್ವಲ್‍ಗೆ ವ್ಯದ್ಯಕೀಯ ಪರೀಕ್ಷೆ ಹಿನ್ನೆಲೆ ಬೌರಿಂಗ್ ಆಸ್ಪತ್ರೆ ಸುತ್ತ ಪೊಲೀಸ್ ಭದ್ರತೆ ನೀಡಲಾಗಿತ್ತು.