ಅತ್ಯಾಚಾರ ಪ್ರಕರಣ: ಕೊನೆಗೂ ಶಾಸಕ ಮುನಿರತ್ನಗೆ ಬಿಗ್‌ ರಿಲೀಫ್

Sampriya

ಮಂಗಳವಾರ, 15 ಅಕ್ಟೋಬರ್ 2024 (18:17 IST)
ಬೆಂಗಳೂರು: ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಹಾಗೂ ಹನಿಟ್ರ್ಯಾಪ್‌ಗೆ ಬಳಸಿಕೊಂಡ ಪ್ರಕರಣ ಸಂಬಂಧ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಪ್ರಕಟಿಸಿದೆ.

ಈ ಮೂಲಕ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ.

ಇನ್ನೂ ಈ ಹಿಂದೆ ದಾಖಲಾದ ಜಾತಿ ನಿಂದನೆ ಕೇಸ್‌ನಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು. ಅದರೆ, ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ಪರಪ್ಪನ ಅಗ್ರಹಾರದ ಬಳಿ ಅತ್ಯಾಚಾರ ಕೇಸ್‌ನಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ