ಅತ್ಯಾಚಾರ ಪ್ರಕರಣ: ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ

Sampriya

ಶುಕ್ರವಾರ, 17 ಮೇ 2024 (14:57 IST)
ಹಾಸನ: ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧನವಾಗಿರುವ ವಕೀಲ ದೇವರಾಜೇಗೌಡ  ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ  ಸಾಕ್ಷಿ ಬಿಡುಗಡೆ ಮುಂದಾಗಿದ್ದ ವಕೀಲ ದೇವರಾಜೇಗೌಡ ಇದೀಗ ಬೇರೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.

ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರು ಈಗ ಮತ್ತೆ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದಾರೆ. ದೇವರಾಜೇಗೌಡ ಪರ ವಕೀಲರು ಇಂದು ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ