ಜಿಪಂ ಸದಸ್ಯೆಯ ರೇಪ್‌ ಕೇಸ್‌: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

Sampriya

ಶುಕ್ರವಾರ, 22 ನವೆಂಬರ್ 2024 (16:52 IST)
ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಹಾಸನ ಮಾಜಿ ಸಂಸದ, ಆರೋಪಿ ಪ್ರಜ್ವಲ್ ರೇವಣ್ಣಗೆ ಕಾನೂನು ಹೋರಾಟದಲ್ಲಿ ಇಂದು ಹಿನ್ನಡೆಯಾಗಿದೆ.

ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮೂರು ಅತ್ಯಾಚಾರ ಕೇಸ್, ಒಂದು ಅಶ್ಲೀಲ ದೃಶ್ಯ ಪ್ರಕರಣದ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿತ್ತು. ಆದ್ರೆ ನಾಲ್ಕನೆ ಪ್ರಕರಣದ ಜಾಮೀನಿ ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು(ನವೆಂಬರ್ 22) ಹೈಕೋರ್ಟ್​, ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ಜಾಮೀನು ಅರ್ಜಿಯನ್ನು ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.


ಜಿಪಂ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ನನ್ನು ಬಂಧಿಸಿರಲಿಲ್ಲ. ಬಂಧನ ಮಾಡದೇ ಎಸ್‌ಐಟಿ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿತ್ತು.

ಪ್ರಕರಣ ಸಂಬಂಧ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ