ಇಂದಿನಿಂದ ಪ್ರಜ್ವಲ್‌ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲೇ ಗತಿ

sampriya

ಸೋಮವಾರ, 10 ಜೂನ್ 2024 (18:45 IST)
Normal 0 false false false EN-IN X-NONE X-NONE
Photo Courtesy X

ಬೆಂಗಳೂರು: ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ  ಅವರ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಇಂದು ಸಂಜೆ ಪರಪ್ಪನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.

ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಇದೀಗ ಜೂನ್.24ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ

ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಎಸ್ಐಟಿ ಅಧಿಕಾರಿಗಳು ಸಲ್ಲಿಸಿದರು.

ಇದರ ಬೆನ್ನಲ್ಲೇ ಕೋರ್ಟ್​​ ಪ್ರಜ್ವಲ್ ರೇವಣ್ಣಗೆ ಜೂನ್. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಅದರಂತೆ ಇದೀಗ ಪ್ರಜ್ವಲ್‌ ರೇವಣ್ಣ ಅವರನ್ನು ರಾಜ್ಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ