ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಪ್ರಚೋಧನಕಾರಿ ಪೋಸ್ಟ್: ಕೋಲ್ಕತ್ತಾ ವಿದ್ಯಾರ್ಥಿ ಅರೆಸ್ಟ್‌

Sampriya

ಸೋಮವಾರ, 19 ಆಗಸ್ಟ್ 2024 (15:40 IST)
Photo Courtesy X
ಕೋಲ್ಕತ್ತಾ: ಇಲ್ಲಿನ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬ ಮೂರು ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಸಂತ್ರಸ್ತೆಯ ಹೆಸರು ಹಾಗೂ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ದೂರು ದಾಖಲಾಗಿದೆ.   

ಅದಲ್ಲದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಚೋದನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹಂಚಿಕೊಂಡ ಆರೋಪದ ಮೇಲೆ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ವಿದ್ಯಾರ್ಥಿಯು ಸಿಎಂ ಹತ್ಯೆಗೆ ಜನರನ್ನು "ಪ್ರೋತ್ಸಾಹಿಸುವ" ಮೂಲಕ ದ್ವೇಷವನ್ನು ಪ್ರಚೋದಿಸುವ ಮತ್ತು ಅಪರಾಧ ಚಟುವಟಿಕೆಯನ್ನು ಉತ್ತೇಜಿಸುವ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪವನ್ನು ಹೊಂದಿದ್ದಾನೆ.

"ಆರೋಪಿ ವ್ಯಕ್ತಿ ಪಶ್ಚಿಮ ಬಂಗಾಳದ ಸಿಎಂ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳು ಮತ್ತು ಜೀವ ಬೆದರಿಕೆಗಳನ್ನು ಹೊಂದಿರುವ ಎರಡು ಕಥೆಗಳನ್ನು ಹಂಚಿಕೊಂಡಿದ್ದಾರೆ" ಎಂದು ಕೋಲ್ಕತ್ತಾ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

 ಕೋಲ್ಕತ್ತಾ ಪೊಲೀಸರು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಏಳು ಎಸ್‌ಎಫ್‌ಐ-ಡಿವೈಎಫ್‌ಐ ಮುಖಂಡರಿಗೆ ವಿಚಾರಣೆಗೆ ನೋಟಿಸ್ ಕಳುಹಿಸಿದ್ದಾರೆ. "ತಪ್ಪು ಮಾಹಿತಿಗಾಗಿ" ಮತ್ತೊಬ್ಬ ವೈದ್ಯರಿಗೆ ನೋಟಿಸ್ ನೀಡಲಾಗಿದೆ. ಸೋಮವಾರ ಹಾಜರಾಗುವಂತೆ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ