ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ

ಮಂಗಳವಾರ, 13 ಅಕ್ಟೋಬರ್ 2015 (12:55 IST)
ನಗರದ ಬ್ಯಾಟರಾಯನಪುರದಲ್ಲಿ ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಬ್ಯಾಟರಾಯನಪುರ ಪೊಲೀಸ್‍ ಠಾಣೆಯಲ್ಲಿ ಅತ್ಯಾಚಾರಕ್ಕೊಳಗಾದ ಬಾಲಕಿ ದೂರು ನೀಡಿದ್ದಾಳೆ.
 
ಸೋಮವಾರ ಸಂಜೆ ತಾಯಿಯೊಂದಿಗೆ ಆಗಮಿಸಿ ಬಾಲಕಿ ದೂರು ಸಲ್ಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಅಪ್ರಾಪ್ತ ಬಾಲಕಿಯ ತಾಯಿಯ ಎರಡನೇ ಪತಿಯಾಗಿದ್ದಾನೆ. ಈತನ ವಿರುದ್ಧ ಪೋಕ್ಸೊ, 376, 506 (ಬಿ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
 
2 ದಿನಗಳಿಂದ  ಮನೆಗೆ ಬರಲು ಹೆದರುತ್ತಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲೇ ಉಳಿದಿದ್ದಳು. ಅನುಮಾನಗೊಂಡ ತಾಯಿ ವಿಚಾರಿಸಿದಾಗ ಬಾಲಕಿ ಸತ್ಯ ಬಿಚ್ಚಿಟ್ಟಿದ್ದಾಳೆ. 
 
ಇದೀಗ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ