ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಾಹಿತಿ ಇಲ್ಲಿದೆ ನೋಡಿ ...!!!

ಶುಕ್ರವಾರ, 29 ಜುಲೈ 2022 (14:05 IST)
ಕೇಂದ್ರ ಸರ್ಕಾರದಿಂದ 2021 ಮತ್ತು 2022ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟç ಪ್ರಶಸ್ತಿಯನ್ನು ನೀಡಲು ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
 
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ರೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳು ಅರ್ಜಿ ಸಲ್ಲಿಸಲು 2022ರ ಆಗಸ್ಟ್ 28 ಕೊನೆಯ ದಿನವಾಗಿದೆ.
 
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ನಂ. 3, ನೆಲ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ