ರವಿ ಬೆಳಗೆರೆಗೆ ಮೂರು ದಿನಗಳ ಷರತ್ತುಬದ್ಧ ಜಾಮೀನು

ಬುಧವಾರ, 13 ಡಿಸೆಂಬರ್ 2017 (16:58 IST)
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರಿಗೆ ಮೂರು ದಿನಗಳ ಮಧ್ಯಂತರ ಜಾಮೀನು ದೊರೆತಿದೆ.
 
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಸಿಟಿ ಸಿವಿಲ್ ಕೋರ್ಟ್ ಬುಧವಾರ ಮೂರು ದಿನಗಳ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
 
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. 
 
ತನಿಖೆಗೆ ಸಹಕರಿಸುವಂತೆ ಸೂಚಿಸಿರುವ ಕೋರ್ಟ್ ಕೆಲವು ಷರತ್ತು ವಿಧಿಸಿ ಡಿಸೆಂಬರ್ 16ರವರೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 1 ಲಕ್ಷ ರೂ. ಭದ್ರತೆ ಮತ್ತು ಇಬ್ಬರು ಶ್ಯೂರಿಟಿ ನೀಡಲು ತಿಳಿಸಿದೆ.
 
ಯಾವುದೇ ದೂರಿಲ್ಲದೇ ತನಿಖೆ ನಡೆಸಲಾಗಿದೆ. ಆರೋಪಿಯೊಬ್ಬನ ಹೇಳಿಕೆ ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂದು ವಕೀಲ ದಿವಾಕರ್ ರವಿ ಬೆಳಗೆರೆ ಪರ ವಾದ ಮಂಡಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ