ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಮತ್ತೆ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ
ಅನಾರೋಗ್ಯದ ಕಾರಣ ಬೆಳಗೆರೆ ಅವರನ್ನು ಮಂಗವಾರ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ರವಿ ಬೆಳಗೆರೆಯವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ. ರಕ್ತಪರೀಕ್ಷೆ ವರದಿ ಬಂದ ಬಳಿಕ ನಿರ್ಧರಿಸೋಣ ಎಂದಿದ್ದರು. ಆದ್ದರಿಂದ ಪುನಃ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು.
ರವಿ ಬೆಳಗೆರೆ ಎರಡನೇ ದಿನವನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಸರಿಯಾಗಿ ಸ್ಪಂದನೆ ಕೂಡ ನೀಡುತ್ತಿಲ್ಲ ಎನ್ನಲಾಗಿದೆ.