PSI ಹುದ್ದೆಗಳಿಗೆ ಮರು ಪರೀಕ್ಷೆ: ಪ್ರವೀಣ್ ಸೂದ್

ಸೋಮವಾರ, 30 ಜನವರಿ 2023 (16:22 IST)
ಕಲಬುರಗಿ : ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಇದೀಗ 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧರಿದ್ದೇವೆ ಎಂದು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
 
545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿದ್ದು, ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಪ್ರಕರಣ ಸಂಪೂರ್ಣ ಇತ್ಯರ್ಥವಾಗುವರೆಗೂ ನೇಮಕಾತಿ ಪ್ರಕ್ರಿಯೆ ನಡೆಸದಂತೆ ನ್ಯಾಯಾಲಯ ನಿರ್ಬಂಧ ಹೇರಿತ್ತು. ಆದರೆ, ಪಿಎಸ್ಐ ಹಗರಣ ತನಿಖೆ ಮುಗಿಯಲು ಇನ್ನೂ ವರ್ಷಗಳ ಕಾಲ ಬೇಕು. ಹೀಗಾಗಿ ನಾವು ಮರುಪರೀಕ್ಷೆ ನಡೆಸಲು ಸಿದ್ಧರಿರುವುದಾಗಿ ತಿಳಿಸಿದರು.

ಮರುಪರೀಕ್ಷೆ ಬೇಗ ಆಗಬೇಕು ಎಂದು ಲಕ್ಷಾಂತರ ಅಭ್ಯರ್ಥಿಗಳು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ನಮ್ಮ ಇಲಾಖೆ ಮರು ಪರೀಕ್ಷೆ ನಡೆಸಲು ಸಿದ್ಧವಿದೆ ಎಂದು ಮಾಹಿತಿ ನೀಡಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ