ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ.. ಆದ್ರೆ ಈ ಷರತ್ತು ಅನ್ವಯ : ಕುಮಾರಸ್ವಾಮಿ
ಶುಕ್ರವಾರ, 12 ಮೇ 2023 (18:39 IST)
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಮೂರು ಪಕ್ಷಗಳು ಅಲರ್ಟ್ ಆಗಿದ್ದು, ಸರ್ಕಾರ ರಚನೆಗೆ ಪ್ಲಾನ್ ನಡೆಸಿವೆ.
ಈ ಹೊತ್ತಿನಲ್ಲೇ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು, ನಾವು ಮೈತ್ರಿಗೆ ಸಿದ್ಧ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಮತದಾನ ನಡೆದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹಾರಿದರು. ವಿದೇಶದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅಲ್ಲಿಂದಲೇ ರಾಜಕೀಯ ಲೆಕ್ಕಾಚಾರ ಶುರು ಮಾಡಿದ್ದಾರೆ. ಯಾರೊಂದಿಗಾದರೂ ಓಕೆ, ಮೈತ್ರಿಗೆ ಸಿದ್ಧ. ಆದರೆ ಕೆಲವು ಷರತ್ತುಗಳು ಇವೆ ಎಂದು ಆಪ್ತರ ಮೂಲಕ ಹೆಚ್ಡಿಕೆ ಖಡಕ್ ಸಂದೇಶ ಕೊಟ್ಟಿದ್ದಾರೆ.
ಯಾರೇ ಮೈತ್ರಿಗೆ ಬಂದರೂ, ನಮ್ಮ ಷರತ್ತಿಗೆ ಒಪ್ಪಿಗೆ ಕೊಟ್ಟರೆ ಮಾತ್ರ ದೋಸ್ತಿ. ನಮ್ಮ ಬೇಡಿಕೆ, ನಮ್ಮ ಷರತ್ತು ಒಪ್ಪಿದವರ ಜೊತೆ ಸರ್ಕಾರ ನಡೆಸುತ್ತೇವೆ. ಎರಡು ಬಾರಿಯಾದ ಅವಾಂತರ ಈ ಬಾರಿ ಆಗಬಾರದು. ದೋಸ್ತಿ ಮಾಡಿಕೊಳ್ಳುವ ಮುನ್ನವೇ ಷರತ್ತುಗಳಿಗೆ ಒಪ್ಪಿಕೊಂಡರೆ ನಾವು ಸಿದ್ಧ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.