ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧ: ಯುದ್ಧಕ್ಕೆ ರೆಡಿಯಾದ ಸಚಿವ ಜಮೀರ್ ಅಹ್ಮದ್‌

Sampriya

ಶನಿವಾರ, 3 ಮೇ 2025 (17:17 IST)
ಮಂಗಳೂರು: ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಮೇಲೆ ನಡೆದ ದಾಳಿ ಬಳಿಕ ಭಾರತ ನಾನಾ ದಾರಿಯಲ್ಲಿ ಪಾಕ್‌ಗೆ ಪ್ರತ್ಯುತ್ತರವನ್ನು ನೀಡುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಹೆಚ್ಚುತ್ತಿದೆ.

ಈ ನಡುವೆ ಕರ್ನಾಟಕದ ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗುವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗಲು ಸಿದ್ದನಾಗಿದ್ದೇನೆ. ಪಾಕ್‌ ಯಾವತ್ತಿಗೂ ನಮ್ಮ ಶತ್ರು ದೇಶವಾಗಿದೆ. ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರಕಾರ ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ ಎಂದಿದ್ದಾರೆ.

ನಾಣು ಈ ಮಾತನ್ನು ಸುಮ್ಮನ್ನೇ ಹೇಳುತ್ತಿಲ್ಲ, ಅಲ್ಲಾನ ಮೇಲಾಣೆ ನನ್ನ ಮಾತಿಗೆ ಬದ್ಧನಾಗಿದ್ದೇನೆ.  ಸೂಸೈಡ್ ಬಾಂಬ್ ಕಟ್ಟಿಕೊಂಡು ನಾನೇ ಹೋಗಲು ಸಿದ್ದ. ನನಗೆ ನಮ್ಮ ಪ್ರಧಾನಿಗಳು ಅನುಮತಿಯನ್ನು ನೀಡಲಿ. ನನ್ನ ಮಾತು ಸತ್ಯ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ