ಇಂದು ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಹಿತಾಸಕ್ತಿ ಇದ್ದರೆ ಕೃಷಿ ಕಾನೂನುಗಳು ಮತ್ತು ಇತರ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ರೈತರೊಂದಿಗೆ ಮಾತನಾಡಲು ಮುಕ್ತರಾಗಿದ್ದೇವೆ. ಅವರು ಏನ್ನನ್ನು ಬಯಸುತ್ತಾರೆ ಎಂಬುದನ್ನು ನಾವು ಆಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಚಳಿಗಾಲದ ಅಧಿವೇಶನವನ್ನು ಫಲಪ್ರದವಾಗಿ ನಡೆಸಲು ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕೆಲವು ಮಸೂದೆಗಳನ್ನು ಅಂಗೀಕರಿಸಲು, ಅಧಿವೇಶನದಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ. ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕೆಲವು ದೀರ್ಘಾವಧಿಯ ಬೇಡಿಕೆಗಳನ್ನು ಪರಿಹರಿಸಲು ನಾವು ಸಿದ್ದರಿದ್ದೇವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳು ಮತ್ತು ಸೂಚನೆಗಳಿಗೆ ಅನುಗುಣವಾಗಿ ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಆದರೆ ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರ್ಕಾರದ ತಿದ್ದುಪಡಿಗಳನ್ನು ಇನ್ನು ವಾಪಸ್ ಪಡೆದಿಲ್ಲ. ಇಲ್ಲ ರೈತರು ನಿನ್ನೆಯಿಂದ ಪ್ರತಿಭಟನೆ ಆರಂಭಿಸಿದ್ದಾರೆ.