ಕಾಯಕಯೋಗಿಗಳಿಂದ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜು

ಸೋಮವಾರ, 27 ಫೆಬ್ರವರಿ 2023 (12:19 IST)
ಬೆಳಗಾವಿ : ಇಂದು (ಸೋಮವಾರ) ನಗರಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಐವರು ಕಾಯಕಯೋಗಿಗಳು ಸ್ವಾಗತಿಸಲಿದ್ದಾರೆ. ಆಟೋ ಚಾಲಕ, ಪೌರ ಕಾರ್ಮಿಕ ಮಹಿಳೆ, ನೇಕಾರ, ರೈತ ಮಹಿಳೆ, ಕಟ್ಟಡ ಕಾರ್ಮಿಕರನ್ನು ಗುರುತಿಸಿ ಮೋದಿಯವರ ಸ್ವಾಗತಕ್ಕೆ ಅವಕಾಶ ಮಾಡಿಕೊಡಲಾಗಿದೆ.
 
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಐವರು ಕಾರ್ಮಿಕರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ಐವರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 

ಮಧ್ಯಾಹ್ನ ಆಗಮಿಸಲಿರುವ ಪ್ರಧಾನಿಗೆ ಆಟೋ ಚಾಲಕ ಮಯೂರ್ ಚೌಹಾಣ್, ಪೌರಕಾರ್ಮಿಕ ಮಹಿಳೆ ಮೀನಾಕ್ಷಿ ತಳವಾರ, ಕಟ್ಟಡ ಕಾರ್ಮಿಕ ಮಂಗೇಶ ಬಸ್ತವಾಡಕರ್, ರೈತ ಮಹಿಳೆ ಶೀಲಾ ಬಾಬಾರುವಾಕ್ ಖನ್ನುಕರ್ ಹಾಗೂ ನೇಕಾರ ಕಲ್ಲಪ್ಪ ಟೋಪಗಿ ಅವರಿಂದ ಸ್ವಾಗತ ಸಿಗಲಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ