4 ರಸ್ತೆ ಸಾರಿಗೆ ನಿಗಮಗಳಿಗೆ 13,000 ಚಾಲಕ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ. ಕೊನೆಯದಾಗಿ 8 ವರ್ಷಗಳ ಹಿಂದೆ 2016ರಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಬಳಿಕ ಇಲ್ಲಿಯವರೆಗೆ 13,669 ಉದ್ಯೋಗಿಗಳು ನಿವೃತ್ತಿ ಹೊಂದಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಮೊದಲ ಹಂತದಲ್ಲಿ 6,500 ಚಾಲನಾ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಇವುಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2,000 ಚಾಲಕ-ಕಮ್-ಕಂಡಕ್ಟರ್‌ಗಳು ಮತ್ತು 300 ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 2,000 ಚಾಲಕ-ಕಮ್-ಕಂಡಕ್ಟರ್‌ಗಳನ್ನು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 2,500 ಕಂಡಕ್ಟರ್‌ಗಳನ್ನು ನೇಮಿಸಿಕೊಳ್ಳಲಿದೆ.