ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾನುವಾರ, 7 ಆಗಸ್ಟ್ 2022 (20:36 IST)
ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ವರುಣನ ಅಬ್ಬರ ಹೆಚ್ಚಿದೆ. ತಲಕಾವೇರಿ ಭಾಗಮಂಡಲದಲ್ಲಿ ಮಳೆ ಹೆಚ್ಚಾದ ಹಿನ್ನಲೆ, ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ.  ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನಾಪೋಕ್ಲು ಭಾಗಮಂಡಲ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ನಾಪೋಕ್ಲು ಭಾಗಮಂಡಲ ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಮಡಿಕೇರಿ ಭಾಗಮಂಡಲ ಮಡಿಕೇರಿ ರಸ್ತೆ ಮೇಲೆ ಸುಮಾರು 2 ಅಡಿಗಳಷ್ಟು ನೀರು ನಿಂತಿದ್ದು, ಮತ್ತಷ್ಟು ಮಳೆ ಹೆಚ್ಚಾದಲ್ಲಿ ಭಾಗಮಂಡಲಕ್ಕೆ ಸಂಪೂರ್ಣ ಬಂದ್ ಸಾಧ್ಯತೆಯಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಮಳೆಹಾನಿ, ಪ್ರವಾಹ ಪೀಡಿತ ಪ್ರದೇಶಗಳಿಗೆ 200 ಕೋಟಿ ಬಿಡುಗಡೆಯಾಗಿದೆ. ಅಪಾರ ಹಾನಿ ಸಂಭವಿಸಿದ್ರು ಕೊಡಗಿಗೆ ಪರಿಹಾರ‌ ನೀಡಿಲ್ಲ ಎಂದು ಮುಖ್ಯಮಂತ್ರಿ ವಿರುದ್ಧ ಕೊಡಗಿನಲ್ಲಿ ಆಕ್ರೋಶ ಭುಗಿಲೆದ್ದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ