ಭಾರೀ ಮಳೆಯಿಂದ ರೆಡ್ ಅಲರ್ಟ್ ಮುಂದುವರಿಕೆ

ಗುರುವಾರ, 8 ಆಗಸ್ಟ್ 2019 (18:18 IST)
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಪರಿಣಾಮ ರೆಡ್ ಅಲರ್ಟ್ ನ್ನು ಮುಂದುವರಿಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಆ. 9 ರಂದು ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದ ಎಲ್ಲಾ ಶಾಲಾ - ಕಾಲೇಜುಗಳಿಗೆ ಆ.9ರಂದು ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಈ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಿದ್ದಾರೆ. ಆಗಸ್ಟ್ 9 ರವರೆಗೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ.
ಉಕ್ಕಿ‌ ಹರಿಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಿಂದ ಜನಜೀವನ ಹದಗೆಟ್ಟಿದೆ. ನೇತ್ರಾವತಿ, ಕುಮಾರಧಾರ ನದಿಗಳ ನೀರು ಅಪಾರ ಪ್ರಮಾಣದಲ್ಲಿ ಹರಿಯುತ್ತಿವೆ. ಮುಂದಿನ 3 ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ಸೂಚನೆ ನೀಡಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ