ಭಾರೀ ಮಳೆಗೆ ರೆಡ್ ಅಲರ್ಟ್: ಶಾಲೆಗಳಿಗೆ ರಜೆ ಘೋಷಣೆ
 
	
		
			 
										    		ಶುಕ್ರವಾರ,  19 ಜುಲೈ 2019 (15:44 IST)
	    		     
	 
 
				
											ಭಾರೀ ಮಳೆಗೆ ಜಿಲ್ಲೆಯ ಜನರು ಹೈರಾಣಾಗಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
									
				
											ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 22 ರ ವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
									
				
											ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
									
				
											ಜುಲೈ 22 ರವರೆಗೂ ಭಾರೀ ಮಳೆ ಸುರಿಯುವ ಲಕ್ಷಣಗಳು ಕಂಡು ಬಂದಿರೋ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ  ಮಾಡಲಾಗಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ಕೊಡಲಾಗಿದೆ.
									
				
											ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
									
  
	
	
   
	
   
		
		
		