ರಾಜ್ಯದ ಈ ಜಿಲ್ಲೆಯಲ್ಲಿ ರೆಡ್ ಅಲರ್ಟ್
ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ ಈ ಜಿಲ್ಲೆಯನ್ನು ರೆಡ್ ಅಲರ್ಟ್ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಜಿಲ್ಲಾ ಮತ್ತು ತಾಲೂಕ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಎಲ್ಲ ರೀತಿಯ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ನದಿ ದಡದಲ್ಲಿರುವ ಹಾಗೂ ಮಣ್ಣಿನ ಮನೆಯಲ್ಲಿ ವಾಸಮಾಡುವ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮನವಿ ಮಾಡಿದ್ದಾರೆ.