ಗಣಪತಿ ಪ್ರಕರಣ ಸಿಬಿಐಗೆ: ರಿಟ್ ಅರ್ಜಿ ವಜಾಗೊಳಿಸಿದ ಕೋರ್ಟ್

ಮಂಗಳವಾರ, 20 ಸೆಪ್ಟಂಬರ್ 2016 (15:45 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಡಿವೈಎಸ್‌ಪಿ  ಎಂ.ಕೆ.ಗಣಪತಿ ಆಹ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಗಣಪತಿಯವರ ತಂದೆ ಕುಶಾಲಪ್ಪ ಹೈಕೋರ್ಟ್ ಮೊರೆ ಹೋಗಿದ್ದರು.  
 
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು.
 
ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರ ಪಾತ್ರವಿರುವ ಕುರಿತು ಯಾವುದೇ ಸಾಕ್ಷಾಧಾರಗಳಿಲ್ಲ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ