ಭಾರತೀಯ ಆಹಾರ ಮಂಡಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಸ್ಪಷ್ಟನೆ

ಗುರುವಾರ, 15 ಜೂನ್ 2023 (14:43 IST)
ಭಾರತೀಯ ಆಹಾರ ಮಂಡಳಿ (FCI) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದು,ಜೂನ್ ತಿಂಗಳ ದಾನ್ಯಗಳ ಹರಾಜು ರದ್ದು ಮಾಡಲಾಗಿದೆ.ಜೂನ್ ತಿಂಗಳಲ್ಲಿ ರಾಜ್ಯ ಸರ್ಕಾರಗಳು ಗೋದಿ ಹಾಗೂ ಅಕ್ಕಿ ಪಡೆಯಲು ಅವಕಾಶವಿಲ್ಲ.ಗೋದಿ ಹಾಗೂ ಅಕ್ಕಿ ದಾನ್ಯಗಳ  ಬೆಲೆ ಏರಿಕೆ ಸಮತೋಲನ ಕಾಪಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ.
 
ಈ ಭಾರಿ OMSSD ಹರಾಜಿನಲ್ಲಿ ಏಕಕಾಲದಲ್ಲಿ 10-100 ಮೆಟ್ರಿಕ್ ಟನ್ ಗಳಷ್ಟು ಅಕ್ಕಿ/ಗೋದಿ ಹರಾಜಿನ ಮೂಲಕ ಖರೀದಿಸಬಹುದು. ಈ ಹಿಂದೆ ಹರಾಜಿನಲ್ಲಿ ಗರಿಷ್ಟ 3000 ಮೆಟ್ರಿಕ್ ಟನ್ ದಾನ್ಯಗಳನ್ನ ಖರೀದಿಗೆ ಅವಕಾಶ ಇತ್ತು. ಸಣ್ಣ ಹಾಗೂ ಮಧ್ಯಮ ಖರೀದಿದಾರರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಾಗೂ ಈ ಯೋಜನೆಯ (OMSSD) ಹೆಚ್ಚು ಜನರನ್ನ ತಲುಪಲು ಸಾಧ್ಯವಾಗಲಿದೆ, ಜೊತೆಗೆ ಖರೀದಿ ಮಾಡಿದ ದಾನ್ಯಗಳು ಕೂಡಲೇ ಜನರಿಗೆ ತಲುಪಲು ಸಾಧ್ಯವಾಗಲಿದೆ ಎಂದು ಸಮರ್ಥನೆ ನೀಡಿದೆ.OMSSDಯ 2023-24 ಆರ್ಥಿಕ ವರ್ಷದ ಮೊದಲ ಹರಾಜು ಜೂನ್ 28ಕ್ಕೆ ನಡೆಯಲಿದೆ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ