ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಗರ್ಭಿಣಿಯರ ಹಿಂದೇಟು: ಬಡವರು ಎಲ್ಲಿಗೆ ಹೋಗಬೇಕೆಂದಾ ಆರ್‌ ಅಶೋಕ್‌

Sampriya

ಸೋಮವಾರ, 16 ಡಿಸೆಂಬರ್ 2024 (16:53 IST)
ಬಳ್ಳಾರಿ: ಬಳ್ಳಾರಿ ಆಸ್ಪತ್ರೆಯಲ್ಲಿ ಸರಣಿ ಬಾಣಂತಿಯರ ಸಾವು ನಡೆದ ಬಳಿಕ ಜಿಲ್ಲಾಸ್ಪತ್ರೆಗೆ ಹೆರಿಕೆಗೆ ಬರಲು ಗರ್ಭಿಣಿಯರು ಹಿಂದೇಟು ಹಾಕಿ, ಖಾಸಗಿ ಆಸ್ಪತ್ರೆಗಳ ಕಡೆ ಮುಖ ಮಾಡುತ್ತಿದ್ದಾರೆ.

ಈ ಬಗ್ಗೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.   ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ಬಡವರಿಗೆ ಪಾಲಿಗೆ ಸಂಜೀವನಿಯಾಗಿದ್ದ ಸರ್ಕಾರಿ ಆಸ್ಪತ್ರೆಗಳು ತಮ್ಮ ಸರ್ಕಾರ ನಿರ್ಲಕ್ಷ್ಯದಿಂದ ಸಾವಿನ ಕೂಪಗಳಾಗಿವೆ. ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಲ್ಲದ ಮೇಲೆ ಬಡವರು ಎಲ್ಲಿಗೆ ಹೋಗಬೇಕು?

ಕೇವಲ ಸರ್ಕಾರಿ ಆಸ್ಪತ್ರೆಗಳ ಮೇಲೆ ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇಡೀ ಕಾಂಗ್ರೆಸ್‌ ಸರ್ಕಾರದ ಮೇಲೆ ಕರ್ನಾಟಕದ ಜನತೆ ಭರವಸೆ ಕಳೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ