ರೇಣುಕಾಸ್ವಾಮಿ ಪ್ರಕರಣ: ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ ಎಂದ ಸಿಎಂ

Sampriya

ಬುಧವಾರ, 19 ಜೂನ್ 2024 (17:14 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲನ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದಿರುವ ಅವರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ.


ಎಸ್.‌ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ