ರೇಣುಕಾಸ್ವಾಮಿ ಹತ್ಯೆ ಪ್ರಕರಣ: 200ಕ್ಕೂ ಅಧಿಕ ಸಾಕ್ಷ್ಯ ವಶಕ್ಕೆ

Sampriya

ಭಾನುವಾರ, 7 ಜುಲೈ 2024 (09:45 IST)
ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ಪೊಲೀಸರು 200ಕ್ಕೂ ಹೆಚ್ಚು ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿದ್ಧಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಕರಣ ಸಂಬಂಧ ಶುಕ್ರವಾರ ಇಬ್ಬರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರುವಂತೆ ತಿಳಿಸಲಾಗಿತ್ತು. ಇನ್ನೂ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸ್ ಇಲಾಖೆ ತನಿಖೆಯನ್ನು ಚುರುಕು ಮಾಡಿದೆ.

ಇನ್ನೂ ಪ್ರಕರಣದಲ್ಲಿ ಆರೋಪಿಗಳು ಸಾಕ್ಷ್ಯ ನಾಶ ಮಾಡಲು ಬೇರೆ ಬೇರೆ ಸಿಮ್‌ನ್ನೂ ಬಳಕೆ ಮಾಡಿದ್ದು ತಿಳಿದು ಬಂದಿದೆ. ಸಿಮ್‌ ಅನ್ನು ವಶಕ್ಕೆ ಪಡೆದಿರುವ ಪೊಲೀಸರು ಎಫ್‌ಎಸ್‌ಎಲ್ ವರದಿಗೆ ಹೈದರಾಬಾದ್‌ಗೆ ಕಳುಹಿಸಿದ್ದು, ವರದಿಯಲ್ಲಿ ಕೃತ್ಯ ಎಸಗಲು ಏನೆಲ್ಲಾ ಪ್ಲ್ಯಾನ್ ಮಾಡಿದ್ದಾರೆಂಬ ಸತ್ಯ ತಿಳಿದುಬರಲಿದೆ. ‌

ಇನ್ನೂ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳು ಬೇರೆಯವರ ಹೆಸರಿನಲ್ಲಿ ಸಿಮ್‌ ಖರೀದಿಸಿ ಮಾತನಾಡಿರುವ ಬಗ್ಗೆ ಪೊಲೀಸರು ರಿಮೈಂಡ್ ಕಾಪಿಯಲ್ಲಿ ಉಲ್ಲೇಖಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ