ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ
ಬಳಿಕ ಮಾತನಾಡಿದ ಸಿಎಂ, ಇಂದು ಅತ್ಯಂತ ಸಂತೋಷದಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಿದ್ದೇನೆ. 10-15 ಲಕ್ಷ ಜನ ಬರೋ ನಿರೀಕ್ಷೆ ಇದೆ. ರಾಜ್ಯದ ಸಸ್ಯಸಂಪತ್ತಿನ ಪ್ರದರ್ಶನ ಆಗ್ತಿದೆ. ರಾಜ್ಯದಲ್ಲಿ ಹಸಿರು ವಿಸ್ತರಣೆಗಾಗಿ 100 ಕೋಟಿ ರೂಪಾಯಿ ಕೊಟ್ಟಿದ್ದೇನೆ ಎಂದರು.
ರಾಜ್ಯದ ತೋಟಗಾರಿಕೆಯಿಂದ ಹಸಿರು ಹೆಚ್ಚಾಗಿ, ಉತ್ಪಾದನೆ ಹೆಚ್ಚಾಗುತ್ತದೆ. ಬೆಂಗಳೂರು ಗಾರ್ಡನ್ ಸಿಟಿ ಎಂದು ಹೆಸರಾಗಿತ್ತು. ಬೆಂಗಳೂರಿನ ಗಾರ್ಡನ್ ಗಳನ್ನು ಬೆಳೆಸುತ್ತೇವೆ. ಗಾರ್ಡನ್ ಸಿಟಿಯ ಗತವೈಭವ ಮತ್ತೆ ಮರುಕಳಿಸಲಿ ಎಂದು ಹೇಳಿದರು.