ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಹಾಕಿ ಸಕ್ರಮ ಮಾಡಿಕೊಳ್ಳಿ-ಸಿಎಂ ಸೂಚನೆ

ಶನಿವಾರ, 23 ಜನವರಿ 2021 (12:23 IST)
ಮೈಸೂರು : ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತದ ನಡೆದ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಈ ಹಿನ್ನಲೆಯಲ್ಲಿ ಸ್ಪೋಟಕ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಈ ವೇಳೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸ್ಫೋಟದ ಬಗ್ಗೆ ತನಿಖೆ ನಡೆಸಿ ತಪಿತಸ್ಥರಿಗೆ ಶಿಕ್ಷೆ ನೀಡುವುದಾಗಿ ಹೇಳಿದ್ದಾರೆ.

ಹಾಗೇ ಇನ್ನು ಮುಂದೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಬಿಡುವುದಿಲ್ಲ. ಹಾಗಾಗಿ ಅಕ್ರಮ ಗಣಿಗಾರಿಕೆ  ನಡೆಸುತ್ತಿರುವವರು ಅರ್ಜಿ ಹಾಕಿ ಸಕ್ರಮ ಮಾಡಿಕೊಳ್ಳಿ. ಇಲ್ಲವಾದರೆ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ ಎಂದು ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ