ಹನುಮ ಧ್ವಜ ಹಾರಿಸಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಭುಗಿಲೆದ್ದ ಅಸಮಾಧಾನ

geetha

ಸೋಮವಾರ, 4 ಮಾರ್ಚ್ 2024 (17:30 IST)
ಬಟ್ಕಾಳ-ಇಂದು ಕಾರ್ಯಕರ್ತರ ಸಭೆಗೆಂದು ಅನಂತ್ ಕುಮಾರ್ ಹೆಗಡೆ ಅವರು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾನಿದ್ದೇನೆ ನಡಿರಿ ಎಂದು ಹೇಳಿ ಅನಂತ್ ಕುಮಾರ್ ಹೆಗಡೆ ಅವರು ತೆರವು ಮಾಡಲಾಗಿದ್ದ ಸ್ಥಳದಲ್ಲೇ ಹನುಮ ಧ್ವಜ ಹಾರಿಸಿದರು. ಅಲ್ಲದೆ ಸಾವರ್ಕರ್ ಬೋರ್ಡ್ ಕೂಡ ಹಾಕಿದರು.ಈ ರೀತಿ ನಡೆದುಕೊಂಡಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
 
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ಸಾವರ್ಕರ್ ಬೊರ್ಡ್ ಸಮೇತ ಧ್ವಜ ಕಟ್ಟೆ ತೆರವು ಮಾಡಲಾಗಿತ್ತು.ಆದ್ರೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಅದೇ ಸ್ಥಳದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ.ಇದಕ್ಕೆ ಸ್ಥಳಿಯ ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಮತ್ತೆ ಧ್ವಜ ದಂಗಲ್ ಕಿಡಿ ಹೊತ್ತಿಸಿದ್ದಾರೆ. ಅನಧಿಕೃತವಾಗಿ ಧ್ವಜ ಕಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ತೆಂಗಿನಗುಂಡಿ ಗ್ರಾಮದಲ್ಲಿ ಕಟ್ಟಲಾಗಿದ್ದ ಧ್ವಜ ಕಟ್ಟೆ ಹಾಗೂ ಸಾವರ್ಕರ್ ಬೊರ್ಡ್ ಅನ್ನು ತೆರವು ಮಾಡಲಾಗಿದ್ದು,ಈಗ ಎಲ್ಲೆಲೂ ವಿರೋಧ ವ್ಯಕ್ತವಾಗಿದ್ದು,ಅನಂತ್ ಕುಮಾರ್ ಹೆಗಡೆ ನಡೆಗೆ ಕೆಂಡಕಾರುತ್ತಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ