ಮೀಸಲಾತಿ ಕಿಚ್ಚು ಮತ್ತೆ ಶುರು

ಶನಿವಾರ, 5 ಮಾರ್ಚ್ 2022 (18:58 IST)
ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಲೇಬೇಕು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೊದಲು ಸರ್ಕಾರ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಂ.ಸಿ. ವೇಣುಗೋಪಾಲ್ ಅವರು ಆಗ್ರಹಿಸಿದ್ದಾರೆ.
ಒರಿಸ್ಸಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡದೇ ಚುನಾವಣೆಗಳನ್ನು ನಡೆಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಆಗಬಾರದು. ಚುನಾವಣೆಗೆ ಮುನ್ನವೇ ಮೀಸಲಾತಿಯನ್ನು ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
 
ಈಗಾಗಲೇ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಪ್ರಮುಖ ಐದು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರ ಮತ್ತು ಸಂಬಂಧ ಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದೆ. ಮುಖ್ಯವಾಗಿ ಸ್ಥಳಿಯ ಸಂಘ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ, ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸಬಾರದು. ಹೆಚ್. ಕಾಂತರಾಜು ವರದಿಯನ್ನು ಜಾರಿಗೊಳಿಸಬೇಕು. ಸುಭಾಷ್ ಆಡಿ ಸಮಿತಿಯನ್ನು ರದ್ದುಗೊಳಿಸಬೇಕು, ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 73 ಜಾತಿ - ಉಪಜಾತಿಗಳನ್ನು ಸೇರಿಸಬೇಕು ಎಂಬುದರ ಬಗ್ಗೆ ಈಗಾಗಲೇ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್,
 
ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ