ನಕಲಿ ರೇಷನ್ ಕಾರ್ಡ್ ಪತ್ತೆ ಹಚ್ಚಿದ್ದರಿಂದ ಸರಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ಉಳಿತಾಯವಾಗಿದೆ. ಆದಾಯ ತೆರಿಗೆ ಪಾವತಿಸುತ್ತಿರುವವರು, ಸರ್ಕಾರಿ ನೌಕರರು ನಿಯಮಗಳನ್ನು ಉಲ್ಲಂಘಿಸಿ ಪಡೆದಿರುವ ಕಾರ್ಡುಗಳನ್ನು ರದ್ದುಪಡಿಸಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
3 ವರ್ಷಗಳಲ್ಲಿ ರಾಜ್ಯಾದ್ಯಂತ ನಕಲಿ ದಾಖಲೆಗಳನ್ನು ನೀಡಿ ಅಕ್ರಮವಾಗಿ ಪಡೆದಿದ್ದ 12 ಲಕ್ಷ 47 ಸಾವಿರ 151 ಕಾರ್ಡುಗಳನ್ನು ರದ್ದುಪಡಿಸಿದೆ. ಬೆಂಗಳೂರು ಮತ್ತು ಬೆಳಗಾವಿ ನಗರಗಳಲ್ಲಿ 1 ಲಕ್ಷಕ್ಕಿಂತ ಹೆಚ್ಚು ಅಕ್ರಮ ಪಡಿತರ ಚೀಟಿಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ, ಚಿತ್ರದುರ್ಗ, ವಿಜಯಪುರ ಹಾಗೂ ಮೈಸೂರುಗಳಲ್ಲಿ 1 ಲಕ್ಷ ಕಾರ್ಡುಗಳು ರದ್ದಾಗಿವೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಬೆಂಗಳೂರು ಗ್ರಾಮಾಂತರ, ದಾವಣಗೇರೆ, ಮಂಡ್ಯ, ಹಾಸನ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಕಾರ್ಡುಗಳು ಅನರ್ಹಗೊಂಡಿವೆ. ಇದರಿಂದ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಉಳಿತಾಯವಾಗಿದೆ.