ಬಯಸಿದ ಖಾತೆ ಸಿಗದಿದ್ದರೆ ರಾಜೀನಾಮೆ- ಆನಂದ ಸಿಂಗ್

ಶನಿವಾರ, 7 ಆಗಸ್ಟ್ 2021 (15:56 IST)
ಬಳ್ಳಾರಿ: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆಯ 2 ದಿನಗಳ ಬಳಿಕ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಅಧಿಕೃತ ಪಟ್ಟಿ ಹೊರಡಿಸಿದ್ದಾರೆ. ಆದರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಆನಂದ ಸಿಂಗ್ ಅವರಿಗೆ ಭೂವಿಜ್ಞಾನ ಮತ್ತು ಪರಿಸರ, ಪ್ರವಾಸೋದ್ಯಮ ಖಾತೆ ನೀಡಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ನಿರೀಕ್ಷೆ ಮಾಡಿದ ಖಾತೆಯನ್ನು ಮುಖ್ಯಮಂತ್ರಿಗಳು ಕೊಟ್ಟಿಲ್ಲ, ನನಗೆ ಇದರ ಬಗ್ಗೆ ನೋವಿದೆ. ನಾಳೆ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಮತ್ತೆ ಬೇಡಿಕೆ ಇಡುತ್ತೇನೆ. ನೋಡೋಣ ಕೊಡುತ್ತಾರೆ ಎಂಬ ನಂಬಿಕೆ ಇದೆ. ಒಂದು ವೇಳೆ ಕೊಡದೆ ಇದ್ದರೆ ಮುಂದೆ ಏನು ಮಾಡಬೇಕು ಎಂದು ನೋಡೋಣ ಎಂದು ಬಳ್ಳಾರಿಯಲ್ಲಿ ಸಚಿವ ಆನಂದ್ ಸಿಂಗ್ ಬಂಡಾಯದ ಬಾವುಟ ಹಾರಿಸಿದರು.
ಸಿಎಂ ಮುಂದೆ ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಇಟ್ಟಿದ್ದೆ. ಆದರೆ ನನ್ನ ನಿರೀಕ್ಷೆಯ ಖಾತೆ ಕೊಟ್ಟಿಲ್ಲ. ಬಯಸಿದ ನನಗೆ ಖಾತೆ ಸಿಗದೆ ಇದ್ದರೆ ರಾಜೀನಾಮೆಗೆ ಸಿದ್ಧ ಎಂದಿದ್ದಾರೆ. ಸರ್ಕಾರ ರಚನೆಗೆ ಮೊದಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದೇನೆ. ನನಗೆ ಸರ್ಕಾರದ ಮೇಲೆ ಭರವಸೆ ಇದೆ ನಿರೀಕ್ಷಿತ ಖಾತೆ ಕೊಡ್ತಾರೆ ಅಂತ, ಸರ್ಕಾರಕ್ಕೆ ನಾನು ಕೂಡ ಮನವಿ ಮಾಡಿದ್ದೇನೆ.  ಇಂದು ರಾತ್ರಿ ಬೆಂಗಳೂರಿಗೆ ಹೊರಟಿದ್ದೇನೆ, ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಚರ್ಚೆ ಮಾಡ್ತೀನಿ. ಸರ್ಕಾರ ಯಾವ ರೀತಿ ಸ್ಪಂದಿಸುತ್ತಾ ಅಂತಾ ಕಾದು ನೋಡುತ್ತೇನೆ. ಸ್ಪಂದಿಸದೆ ಇದ್ದರೆ ನನ್ನ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದರು. ನಿರೀಕ್ಷಿತ ಖಾತೆ ಸಿಕ್ಕಿಲ್ಲ ಅಂತ ರಾಜೀನಾಮೆ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ ಆನಂದ್ ಸಿಂಗ್ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಳಿ ಡಿಪಿಎಆರ್, ಹಣಕಾಸು, ಗುಪ್ತಚರ, ಸಂಪುಟ ವ್ಯವಹಾರ, ಬೆಂಗಳೂರು ಅಭಿವೃದ್ಧಿ ಖಾತೆಗಳನ್ನ ಇರಿಸಿಕೊಂಡಿದ್ದಾರೆ. ಹಾಗೂ ಇನ್ನೂ ಹಂಚಿಕೆಯಾಗದೇ ಉಳಿದ ಇತರೆಲ್ಲಾ ಖಾತೆಗಳು ಸದ್ಯ ಸಿಎಂ ಬಳಿಯೇ ಇರಲಿವೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ