ಮಂಗಳೂರು : ಆರೋಪಿಯಾಗಿ ಪ್ರಕರಣ ದಾಖಲಾಗಿರುವ ಕಾರಣ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹಾಗೂ ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ಆರೋಪಿಯಾಗಿ ಪ್ರಕರಣ ದಾಖಲಾದ ಸಂದರ್ಭದಲ್ಲಿ ಯಾವುದೇ ಸಚಿವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡುತ್ತಾ ಬಂದಿರುವವುದು ಈ ಹಿಂದೆ ನಡೆದುಕೊಂಡು ಬಂದಿರುವ ಸಂಪ್ರದಾಯ.
ಈಶ್ವರಪ್ಪ ಈ ಸಂಪ್ರದಾಯವನ್ನು ಪಾಲಿಸದೆ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ಸಚಿವ ಕೆ.ಜೆ ಜಾರ್ಜ್ ಅವರ ಮೇಲಿನ ಆರೋಪ ದಾಖಲಾದಾಗ ಅವರು ರಾಜೀನಾಮೆ ನೀಡಿದ್ದಾರೆ.
ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿತ್ತು. ಸರ್ಕಾರದ ಕಾಮಗಾರಿಯಲ್ಲಿ ಶೇ.40 ಕಮೀಷನ್ ನೀಡಬೇಕು ಎಂದು ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿ ಗೆ ಪತ್ರ ಬರೆದು ಮನವಿ ಮಾಡಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಕಿಡಿಕಾರಿದ್ದಾರೆ.