ಆರೋಪ ಸಾಬೀತಾದಲ್ಲಿ ರಾಜಕೀಯದಿಂದ ನಿವೃತ್ತಿ: ವೇಣುಗೋಪಾಲ್ ಸವಾಲ್
ಶನಿವಾರ, 14 ಅಕ್ಟೋಬರ್ 2017 (14:39 IST)
ಲೈಂಗಿಕ ಶೋಷಣೆ ನೀಡಿದ ಆರೋಪ ಹಿನ್ನೆಲೆ ತನಿಖೆ ವಿಚಾರದಲ್ಲಿ ತಪ್ಪು ಸಾಬೀತಾದಲ್ಲಿ ಸಾರ್ವಜನಿಕ ಜೀವನದಿಂದಲೇ ನಿವೃತ್ತಿಯಾಗುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸವಾಲ್ ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪ ಮಾಡಿದ ಮಹಿಳೆಯ ಮೇಲೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ. ಆರೋಪಿ ಮಹಿಳೆ ಸರಿತಾ 36 ಕ್ರಿಮಿನಲ್ ಕೇಸ್‌ಗಳನ್ನು ಎದುರಿಸುತ್ತಿದ್ದಾಳೆ ಎಂದು ತಿಳಿಸಿದ್ದಾರೆ.
ಕಳೆದ 40 ವರ್ಷದಿಂದ ರಾಜಕೀಯದಲ್ಲಿದ್ದೇನೆ. ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ. ವಿಪಕ್ಷಗಳು ಕೇವಲ ಚುನಾವಣೆಗಾಗಿ ಆರೋಪಗಳನ್ನು ಮಾಡುತ್ತಿವೆ ಎಂದು ತಿರುಗೇಟು ನೀಡಿದ್ದಾರೆ.
ನಾನು ಚುನಾವಣೆಗೆ ನಿಂತಾಗಿ ವಿಪಕ್ಷಗಳು ಇಂತಹ ಅಪಪ್ರಚಾರ ಮಾಡುತ್ತವೆ. ಚುನಾವಣೆ ನಿಂತಾಗ ಹೆಚ್ಚು ಅಪಪ್ರಚಾರ ಮಾಡಿದ್ದವು ಎಂದು ಲೇವಡಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.