ಭ್ರಷ್ಟಾಚಾರ ಪ್ರಕರಣ: ನಿವೃತ್ತ ಲೋಕಾಯುಕ್ತ ಭಾಸ್ಕರ್‌ರಾವ್ ಪುತ್ರನಿಗೆ ಜಾಮೀನು

ಸೋಮವಾರ, 19 ಸೆಪ್ಟಂಬರ್ 2016 (15:10 IST)
ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದುವರೆ ವರ್ಷದಿಂದ ಜೈಲಿನಲ್ಲಿರುವ 11 ಆರೋಪಿಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ಭಾಸ್ಕರ್ ರಾವ್ ಪುತ್ರ ಅಶ್ವಿನ್ ರಾವ್, ಸೈಯದ್ ರಿಯಾಜ್, ಶ್ರೀನಿವಾಸಗೌಡ, ಶಂಕರೇಗೌಡ, ಭಾಸ್ಕರ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 
 
ಲೋಕಾಯುಕ್ತದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 2015 ರ ಜುಲೈ ತಿಂಗಳಿಂದ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದರು. ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷ್ಯ ನಾಶಪಡಿಸದಂತೆ ಷರತ್ತು ವಿಧಿಸಿ ಇಂದು ಹೈಕೋರ್ಟ್ ನ್ಯಾಯಮೂರ್ತಿಗಳು ಪ್ರಕರಣದ 11 ಆರೋಪಿಗಳಿಗೂ ಜಾಮೀನು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ