ಬೆಂಗಳೂರು: ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರಿಗೆ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆಯಾಗಿದೆ.
ಇನ್ನೂ ಮಹಿಳೆಯ ಅಪಹರಣ ಕೇಸ್‌ನಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ. ಇನ್ನೂ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮೇ 20 ಸೋಮವಾರಕ್ಕೆ ಆದೇಶ ಕಾಯ್ದಿರಿಸಿದರು.
ಸಂತ್ರಸ್ತೆಯ ಸ್ವ-ಇಚ್ಚಾ ಹೇಳಿಕೆಯನ್ನು ಓದಿದ ಎಸ್‍ಪಿಪಿ, ನಾನು ಆ ಮನೆಗೆ ಸೇರಿದಾಗ ನನ್ನ ಪ್ರಜ್ವಲ್ ರೇವಣ್ಣ ಬಗ್ಗೆ ಎಚ್ಚರಿಕೆ ನೀಡುತ್ತಾ ಇದ್ದರು. ಪ್ರಜ್ವಲ್ ಪದೇ ಪದೇ ಬಂದು ಮೈ ಮುಟ್ಟಿ ಎಳೆಯುತ್ತಾ ಇದ್ದರು. ಎಣ್ಣೆ ಹಚ್ಚು ಬಾ ಎಂದು ಹೇಳುತ್ತಾ ಇದ್ದರು. ರೇವಣ್ಣ ಕೂಡ ನನ್ನ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ. ಹೊಟ್ಟೆ ಎದೆಯ ಭಾಗವನ್ನು ಮುಟ್ಟಿ ಎಳೆದಾಡಿದ್ದಾರೆ. ರೇವಣ್ಣ ವರ್ತನೆ ಬಗ್ಗೆ ದೂರು ನೀಡಿದ್ರು ಯಾವುದೇ ಪ್ರಯೋಜನ ಆಗಲಿಲ್ಲ ಎಂದು ಹೇಳಿದರು.
ಭವಾನಿ ಅವರು ಮನೆಯಲ್ಲಿ ಇಲ್ಲದ ವೇಳೆ ರೇವಣ್ಣ ಅವರು ಸೊಂಟ ಜಿಗುಟುತ್ತಿದ್ದರು. ಈ ಬಗ್ಗೆ ನಾನು ಭವಾನಿ ಅವರ ಬಳಿ ಹೇಳಿಕೊಂಡಿದ್ದೆ, ಆದರೆ ಯಾವುದೇ ಪ್ರಯೋಜನವಾಗಿಲ್ಲ. ರೇವಣ್ಣ ಲೈಂಗಿಕ ಕಿರುಕುಳ ಇಷ್ಟಕ್ಕೆ ನಿಂತಿಲ್ಲ. ಆಶ್ರಯ ಮಂಜೂರು ಮನೆಯಿಂದ ಹೊರ ಹಾಕಿದ್ದರು ಎಂದು ತಿಳಿಸಿದರು.